ಉಡುಪಿ: ಉಡುಪಿಯ ಶ್ರೀಕೃಷ್ಣ ಮಠಕ್ಕೆ ನವದಂಪತಿಗಳಾದ ಸಂಸದ ತೇಜಸ್ವಿ ಸೂರ್ಯ, ಶಿವಶ್ರೀ ಭೇಟಿ ನೀಡಿ ದೇವರ ಸನ್ನಿಧಿಯಲ್ಲಿ ಕೀರ್ತನೆ, ಸಂಗೀತ ಸೇವೆ ಸಲ್ಲಿಸಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದ ದಂಪತಿ ಕೀರ್ತನೆ, ಸಂಗೀತ ಸೇವೆ ಸಲ್ಲಿಸಿದರು.
ಮದುವೆಯ ನಂತರ ತೇಜಸ್ವಿ ಸೂರ್ಯ ಅವರು ದೇವಾಲಯಗಳಿಗೆ ಭೇಟಿ ಕೊಡುತ್ತಿದ್ದಾರೆ, ಇದು ಒಳ್ಳೆಯ ಬೆಳವಣಿಗೆ . ಇಬ್ಬರೂ ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುವ ದಂಪತಿಯಾಗಿದ್ದಾರೆ ಎಂದು ಇದೇ ವೇಳೆ ನವದಂಪತಿಗಳನ್ನು ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಡಿ ಹೊಗಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4