ನಟ ಧನಂಜಯ್ ಬೆಂಬಲಕ್ಕೆ ನೀನಾಸಂ ಸತೀಶ್ ನಿಂತಿದ್ದಾರೆ. ‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ ಕಲೆಗೆ ಅಪಮಾನ ಮಾಡಲಾಗಿದೆ ಎಂಬ ವಿಚಾರ ವಿವಾದಕ್ಕೀಡಾದ ಬೆನ್ನಲ್ಲೆ ಸಾಕಷ್ಟು ಮಂದಿ ನಟ-ನಟಿಯರು ಡಾಲಿ ಬೆಂಬಲಿಕ್ಕೆ ನಿಂತಿದ್ದಾರೆ. ಇದೀಗ ನಿನಾಸಂ ಸತೀಶ್ ಬೆಂಬಲ ನೀಡಿದ್ದಾರೆ.
ಧನಂಜಯ್ ನನ್ನ ಗೆಳೆಯ, ಅವನ ಎಲ್ಲ ವಿಚಾರಗಳ ಜೊತೆ ಮತ್ತು ಮಾನವೀಯತೆ ಜೊತೆ ನಾನಿದ್ಡೇನೆ ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ನನ್ನಂತೆ ಊರು ಬಿಟ್ಟು ಬ್ಯಾಗು ಹಿಡಿದು ಬಂದವನು, ಸುಮ್ಮನೆ ಸಣ್ಣ ಕಾರಣ ಹಿಡಿದು ಅವನನ್ನು ತೇಜೊವಧೆ ಮಾಡುವ ಗೆಳೆಯರೆ, ನೀವು ನಮ್ಮ ಏಳಿಗೆಯನ್ನು ಬಯಸಿದವರೇ. ವೈಷಮ್ಯ ಬಿಡಿ’ ಎಂದು ಬರೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz