ಟೇಕಾಫ್ ಆಗುತ್ತಿದ್ದ ವಿಮಾನವೊಂದು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಪೆರುವಿನ ಜಾರ್ಜ್ ಚಾವೆಜ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಸಂಭವಿಸಿದೆ.
ದುರ್ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ.
ವೀಡಿಯೋದಲ್ಲಿ ಅಗ್ನಿಶಾಮಕ ಟ್ರಕ್ ರನ್‌ವೇಯಲ್ಲಿ ವೇಗವಾಗಿ ಸಾಗುತ್ತಿರುವುದು ಕಂಡುಬಂದಿದ್ದು, ಎದುರುಗಡೆ ಲ್ಯಾಂಡ್ ಆಗುತ್ತಿದ್ದ ವಿಮಾನವನ್ನು ಕಂಡ ಅಗ್ನಿಶಾಮಕ ಟ್ರಕ್‌ನಲ್ಲಿದ್ದವರು ಅಪಘಾತವನ್ನು ತಪ್ಪಿಸಲು ವಾಹನವನ್ನು ಯೂ ಟರ್ನ್ ಹೊಡೆದಿದ್ದಾರೆ. ಅಪಘಾತವನ್ನು ತಪ್ಪಿಸಲು ಸಾಧ್ಯವಾಗದೇ ವಿಮಾನ ವೇಗವಾಗಿ ಬಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತಕ್ಕೊಳಗಾದ ಲತಮ್ ಏರ್‌ಲೈನ್ಸ್‌ನ ಎ320 ಏರ್‌ಬಸ್‌ನಲ್ಲಿ 102 ಪ್ರಯಾಣಿಕರಿದ್ದರು. ಡಿಕ್ಕಿ ಸಂಭವಿಸಿದ ಪರಿಣಾಮ ವಿಮಾನದ ರೆಕ್ಕೆ, ಹಿಂಭಾಗಕ್ಕೆ ಬೆಂಕಿ ತಗುಲಿದೆ. ಸದ್ಯ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಘಟನೆಯ ಬಳಿಕ ವಿಮಾನ ನಿಲ್ದಾಣದ ಎಲ್ಲಾ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಎಲ್ಲಾ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಏರ್‌ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy