ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೊಂಗಸಂದ್ರದಲ್ಲಿ ಪ್ರಚಾರ ನಡೆಸಿದ್ದು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಯಿತು.
ನಮ್ಮ ಪಕ್ಷವನ್ನು ತೆಲಂಗಾಣದಲ್ಲಿ ಭರ್ಜರಿ ಬಹುಮತದಿಂದ ಗೆಲ್ಲಿಸುವ ಮೂಲಕ ಹೊಸ ಪರ್ವವನ್ನು ಆರಂಭಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ರೋಡ್ ಶೋ ವೇಳೆ ಜೊತೆಗೂಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರಿಗೆ ಶಕ್ತಿ ತುಂಬಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಮತ ಯಾಚಿಸಿದರು.
ದೇವೇಗೌಡ ಪೆಟ್ರೋಲ್ ಬಂಕ್ ಸಮೀಪದ ಎಸಿಎಸ್ ಮೇಘಾ ಅಪಾರ್ಟೆಂಟ್, ಶಾಲಿನಿ ಅಪಾರ್ಟೆಂಟ್, ಬಿಟಿಎಂನ ಲೇಕ್ ವ್ಯೂ ಅಪಾರ್ಟೆಂಟ್, ಬನ್ನೇರುಘಟ್ಟ ರಸ್ತೆಯ ಎಸ್ಟೀಮ್ ಎಕ್ಲೀವ್ ಅಪಾರ್ಟೆಂಟ್ ಹಾಗೂ ಬೊಮ್ಮನಹಳ್ಳಿಯ ಗ್ರೀನೇಜ್ ಅಪಾರ್ಟೆಂಟ್ ಗಳಿಗೆ ಭೇಟಿ ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296