ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕು ಇರಿದ ಘಟನೆ ನಡೆದಿದೆ.
ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ಈ ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ. 20 ವರ್ಷದ ಹಿಂದೆ ಅಂಬರೀಶ್ ಎಂಬಾತನ ಪ್ರೀತಿಸಿ ಶ್ರುತಿ ಮದುವೆಯಾಗಿದ್ದರು. ಮದುವೆಯಾಗಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಇತ್ತೀಚೆಗೆ ವಿವಿಧ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


