nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಟೆಂಪಲ್ ಇನ್‌ ಸೈಡ್ ನೋ ವೆಸ್ಟರ್ನ್ ಡ್ರೆಸ್ʼ!!: ಡ್ರೆಸ್ ಕೋಡ್ ಕಡ್ಡಾಯ
    ರಾಜ್ಯ ಸುದ್ದಿ March 23, 2024

    ‘ಟೆಂಪಲ್ ಇನ್‌ ಸೈಡ್ ನೋ ವೆಸ್ಟರ್ನ್ ಡ್ರೆಸ್ʼ!!: ಡ್ರೆಸ್ ಕೋಡ್ ಕಡ್ಡಾಯ

    By adminMarch 23, 2024No Comments2 Mins Read
    temple

    ಇನ್ಮುಂದೆ ದೇವಸ್ಥಾನಗಳಿಗೆ ಹೆಂಗೆಂಗೋ, ಯಾವುದೋ ಡ್ರೆಸ್‌ ನಲ್ಲಿಹೋದ್ರೆ ಒಳಕ್ಕೆ ಪ್ರವೇಶಿಸೋಕೆ ಬಿಡಲ್ಲ, ಹೌದು, ರಾಜಧಾನಿಯ ಹಲವು ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆಯನ್ನು ಶುರುಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಹಲವು ಕಡೆಗಳಲ್ಲಿ ಬಿಗಿ ಮಾಡಲಾಗಿದೆ. ರಾಜ್ಯದ ಕೆಲವು ದೇವಸ್ಥಾನಗಳ ಎದುರು ಭಾಗದಲ್ಲಿ ಈ ಬಗ್ಗೆ ಫಲಕ ಅಳವಡಿಸಿದ್ದರೂ ಕೆಲವರು ಕ್ಯಾರೇ ಅನ್ನುತ್ತಿರಲಿಲ್ಲ. ಇದೀಗ ಬೆಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಈ ಕುರಿತು ಬೋರ್ಡ್ ಅಳವಡಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    ಸೀರೆ, ಚೂಡಿದಾರ್‌ ಬಿಟ್ರೆ ಮಹಿಳೆಯರಿಗೆ ಬೇರೆ ಡ್ರೆಸ್‌ ಹಾಕಿಕೊಂಡು ಬಂದ್ರೆ ಒಳ ಪ್ರವೇಶವಿಲ್ಲ ಅನ್ನೋ ಬೋರ್ಡ್‌ಗಳನ್ನು ಕೆಲ ಪ್ರಸಿದ್ಧ ದೇವಸ್ಥಾನಗಳ ಮುಂದೆ ನೀವು ನೋಡಿರಬಹುದು. ಇದೀಗ ಸದ್ಯ ಸಾಂಪ್ರದಾಯಿಕ ಹಾಗೂ ಸಭ್ಯ ಉಡುಪು ಧರಿಸಿ ಬಂದವರಿಗೆ ಮಾತ್ರ ದೇವಸ್ಥಾನದೊಳಗೆ ಪ್ರವೇಶ ನೀಡಲಾಗುತ್ತದೆ. ಶಾರ್ಟ್ಸ್, ಟೀ ಶರ್ಟ್, ನೈಟ್ ಪ್ಯಾಂಟ್ ಧರಿಸಿ ಬಂದವರಿಗೆ ಪ್ರದೇಶವಿಲ್ಲ ಎಂದು ಸೂಚಿಸುವ ಫಲಕಗಳನ್ನು ಬೆಂಗಳೂರಿನ ಕೆಲ ದೇವಸ್ಥಾನಗಳ ಎದುರಲ್ಲಿ ಬೋರ್ಡ್‌ ಅಳವಡಿಸಲಾಗಿದೆ.


    Provided by
    Provided by

    ಇತ್ತೀಚೆಗೆ, ದೇವಾಲಯದ ಒಳಗೆ ವಸ್ತ್ರ ಸಂಹಿತೆ ಪಾಲಿಸುವಂತೆ, ವಿದೇಶಿ ವಸ್ತ್ರಗಳು ಹಾಗೂ ತುಂಡುಡುಗೆ ಧರಿಸಿದವರಿಗೆ ದೇವಾಲಯದ ಒಳಗೆ ಪ್ರವೇಶಕ್ಕೆ ಅವಕಾಶ ನೀಡದಂತೆ ‘ಟೆಂಪಲ್ ಇನ್‌ಸೈಡ್ ನೋ ವೆಸ್ಟರ್ನ್ ಡ್ರೆಸ್ʼ  ಅಭಿಯಾನ ಆರಂಭಿಸಲಾಗಿತ್ತು. ಇದರ ಬಳಿಕ ರಾಜಧಾನಿಯ ದೇವಾಲಯಗಳಲ್ಲಿ ಅಧಿಕೃತವಾಗಿ ವಸ್ತ್ರಸಂಹಿತೆ ಜಾರಿಯಾಗಿತ್ತು.

    ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಈ ಹಿಂದೆಯೂ ಇದಕ್ಕೆ ಒತ್ತಾಯ ಮಾಡಲಾಗಿತ್ತು. ಇದನ್ನು ಹಿಂದೂ ಸಂಘಟನೆಗಳು ಬೆಂಬಲಿಸಿದ್ದವು. ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು.

    ಕಳೆದ ತಿಂಗಳು ರಾಜ್ಯದ ಎಲ್ಲಾ ಖಾಸಗಿ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳ ಸಭೆ ಮಾಡಲಾಗಿತ್ತು. ಸಭೆಯಲ್ಲಿ ರಾಜ್ಯದ ಎಲ್ಲಾ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿಯಿಂದ ರಾಜ್ಯದ ಹಾಗೂ ರಾಜಧಾನಿಯ ದೇವಾಲಯಗಳಲ್ಲಿ ಭಾರತೀಯ ಉಡುಪುಗಳನ್ನು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನ ಮಾಡುವ ಅವಕಾಶ ಕಲ್ಪಿಸಲಾಗುತ್ತಿದೆ.

    ಸೂಚನೆಯ ಪ್ರಕಾರ ಪುರುಷರು ದೇವಾಲಯಕ್ಕೆ ಚಡ್ಡಿ, ಬರ್ಮುಡಾ, ರಿಪ್ಟ್‌ಡ್ (ಹರಿದ) ಜೀನ್ಸ್‌, ಎದೆ ಕಾಣುವ ಟಿಶರ್ಟ್‌ ಧರಿಸಿಕೊಂಡು ಬರುವಂತಿಲ್ಲ. ಮಹಿಳೆಯರು ಸ್ಕರ್ಟ್, ಮಿಡಿ, ರಿಪ್ಟ್‌ಡ್‌ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬಂದರೆ ಟೆಂಪಲ್‌ಗೆ ನೋ ಎಂಟ್ರಿ. ಸಭ್ಯವಾದ ಭಾರತೀಯ ಉಡುಗೆಗಳಿಗೆ ಮಾತ್ರ ಅವಕಾಶ. ಸ್ತ್ರೀಯರು ಸೀರೆ, ಚೂಡಿದಾರ್‌, ಕುರ್ತಾ ಧರಿಸಬೇಕು. ಪುರುಷರು ಪಂಚೆ, ಶೇರ್ವಾನಿ, ಪ್ಯಾಂಟ್‌, ಅಂಗಿ ಧರಿಸಬೇಕು. ಬಿಗಿಯಾದ ಜೀನ್ಸ್‌ ಗಳನ್ನು ಧರಿಸುವಂತಿಲ್ಲ.

    ಕೇರಳದ ಹಲವಾರು ದೇವಾಲಯಗಳಲ್ಲಿ ಈ ಬಗ್ಗೆ ಬಿಗಿಯಾದ ವಸ್ತ್ರ ಸಂಹಿತೆ ಜಾರಿಯಲ್ಲಿದೆ. ಕೇರಳದ ಕೆಲವು ಕಡೆ ಹಾಗೂ ದಕ್ಷಿಣ ಕನ್ನಡ- ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರು ಅಂಗಿ ಧರಿಸಿ ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ. ಮುಜರಾಯಿ ಇಲಾಖೆ ಈ ಬಗ್ಗೆ ಯಾವುದೇ ನಿರ್ದೇಶನ ಹೊಂದಿಲ್ಲ. ಆದರೆ ಆಯಾ ದೇವಸ್ಥಾನದ ಆಚಾರಸಂಹಿತೆಗೆ ಅನುಗುಣವಾಗಿ ನಿಯಮಗಳನ್ನು ಪಾಲಿಸಲಾಗುತ್ತಿದೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.