ತುಮಕೂರು: ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣರಿಂದ ತುಮಕೂರು ಜಿಲ್ಲೆಯ ವಿವಿಧ ದೇವರುಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿ ಸುದೀರ್ಘಸಮಾಲೋಚನೆಯನ್ನು ನಡೆಸುತ್ತಿದ್ದಾರೆ.
ಭಾನುವಾರ ತಿಪಟೂರಿನ ದಸರಿಘಟ್ಟ ಚೌಡೇಶ್ವರಿ ದೇವಸ್ಥಾನ, ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಸೋಮಣ್ಣ ಭೇಟಿ ನೀಡಿದರು.
ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ಆಶೀರ್ವಾದ ಪಡೆದ ಸೋಮಣ್ಣ ಆದಿಚುಂಚನಗಿರಿ ಶ್ರೀಗಳನ್ನೂ ಭೇಟಿ ಮಾಡಿದರು.
ಮತ್ತೊಂದೆಡೆ ಜೆಡಿಎಸ್ ಶಾಸಕರನ್ನು, ಮುಖಂಡರನ್ನು ಭೇಟಿ ಮಾಡುತ್ತಿರುವ ಸೋಮಣ್ಣ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ, ತಿಪಟೂರು ಕ್ಷೇತ್ರದ ಜೆಡಿಎಸ್ ಮುಖಂಡರನ್ನು ಭೇಟಿಯಾದರು.
ಈ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮತಗಳು ಚದುರ್ಗೆ ಹೋಗದಂತೆ ಮೈತ್ರಿ ಅಭ್ಯರ್ಥಿ ಎಂಬುದಾಗಿ ಹೇಳು ಪಕ್ಷದ ಕಾರ್ಯಕರ್ತರನ್ನು ಮನವೊಲಿಸುವ ಯತ್ನದಲ್ಲಿ ತೊಡಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296