ತುಮಕೂರು: ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಇಂದು ತುಮಕೂರಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಭಾರೀ ಪ್ರತಿಭಟನೆ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾಮಗಾರಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.
ಜಿಲ್ಲಾಧಿಕಾರಿ ಪೋನ್ ಮೂಲಕ ಭರವಸೆ ನೀಡಿದ ನಂತರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಹೋರಾಟಗಾರರು ಹೋರಾಟ ಕೈಬಿಟ್ಟಿದ್ದಾರೆ.
ಸಂಕಾಪುರ ಬಳಿಯ ಕಾಮಗಾರಿ ಬಳಿಗೆ ಬಂದು ರೈತರು ಹೋರಾಟ ಮಾಡಿದ್ದಾರೆ. ರೈತರ ಹೋರಾಟಕ್ಕೆ ಸ್ಪಂದಿಸಿ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ಶಾಸಕರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸದ್ಯ ಹೋರಾಟಗಾರರಿಂದ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW