ಮಹಾರಾಷ್ಟ್ರ: ಮಹಾರಾಷ್ಟ್ರದ ನಾಗಸಾಪಾಟ ಬಳಿ ಮದುವೆಗೆ ಎಂದು ಹೊರಟಿದ್ದ ಕ್ರೂಜರ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಬಾಗಲಕೋಟೆ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ ಜಿಲ್ಲೆಯ ಭಾಗ್ಯಶ್ರೀ ಅಂಬೇಕರ್(18), ನಿವೇದಿತ(17), ಉಜ್ವಲ ಶಿಂದೆ(19) ಮೃತ ದುರ್ದೈವಿಗಳಾಗಿದ್ದಾರೆ. ವಿಜಯಪುರ ಜಿಲ್ಲೆಯ ಅನುಸೂಯ ಮೊರೆ(56) ಎನ್ನುವ ಮಹಿಳೆ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮೃತರು ಮದುವೆಗೆ ಎಂದು ಹೊರಟಿದ್ದರು. ಈ ವೇಳೆ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296