ತುಮಕೂರು: ಟಾಟಾ ಏಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಬೇಗೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಚನ್ನರಾಯಪಟ್ಟಣ ಮೂಲದ ಅಣ್ಣೇಗೌಡ(38), ನಿರಂಜನ್(37) ಮೃತ ದುರ್ದೈವಿಗಳಾಗಿದ್ದಾರೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಟಾಟಾ ಏಸ್ ಚಾಲಕನನ್ನು ವಶಕ್ಕೆ ಪಡೆದಿರುವ ಕುಣಿಗಲ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.


