ಉತ್ತರ ಪ್ರದೇಶ: ಟೆಂಪೋ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ನಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದದಲ್ಲಿ ಸಂಭವಿಸಿದೆ.
ವೇಗವಾಗಿ ಬಂದ ಡಂಪರ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ದಟ್ಟವಾದ ಮಂಜಿನಿಂದ ಉಂಟಾದ ಕಡಿಮೆ ಗೋಚರತೆಯು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಅಲ್ಲಾಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಫರೂಕಾಬಾದ್ ರಸ್ತೆಯಲ್ಲಿ ಘರ್ಷಣೆ ಸಂಭವಿಸಿದ್ದು, ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.


