ತುಮಕೂರು: ಆಂಧ್ರಪ್ರದೇಶ ಕರ್ನೂಲ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ತುಮಕೂರು ಮೂಲದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ನವೀನ್, ಸಂತೋಷ್ ಹಾಗೂ ಲೋಕೇಶ್ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ.
ಕೆಂಕೆರೆ ನವೀನ್ ಚಿಕ್ಕನಾಯಕನಹಳ್ಳಿ, ಸ್ಥಳೀಯ ಬಿಜೆಪಿ ಮುಖಂಡರಾಗಿದ್ದು, ತಾಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷ ಆಗಿದ್ದರು. ಸಂತೋಷ್ ಕೂಡಾ ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಆಗಿದ್ದರು.
ಸಂತೋಷ್ ಹುಟ್ಟುಹಬ್ಬದ ಆಚರಣೆಗಾಗಿ ಆಂದ್ರ ಪ್ರದೇಶದ ಪ್ರವಾಸಕ್ಕೆ ಒಟ್ಟು 6 ಮಂದಿ ತೆರಳಿದ್ದರು. ಮಂತ್ರಲಾಯ ದರ್ಶನ ಮುಗಿಸಿ ಶ್ರೀಶೈಲಕ್ಕೆ ಹೋಗುವ ಸಂದರ್ಭದಲ್ಲಿ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW