ಬೆಂಗಳೂರು : ಕ್ಯಾಂಟರ್ ವಾಹನವೊಂದು ಹಿಂದಿನಿಂದ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ವಜ್ರಮುನೇಶ್ವರ ಕೆಳಸೇತುವೆಯ ಬಳಿ ನಡೆಯಿತು.
ವಿಜಯನಗರದ ಹೊಸಹಳ್ಳಿ ನಿವಾಸಿಗಳಾದ ಬೈಯಣ್ಣ(55) ಮತ್ತು ನಿರ್ಮಲ (44) ಮೃತ ದುರ್ದೈವಿಗಳು.
ಗೃಹಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ಮಾರ್ಗಮಧ್ಯೆ ದುರ್ಘಟನೆ ನಡೆದಿದೆ. ತಲಘಟ್ಟಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


