ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ ಮಹಡಿವರೆಗೂ ಹಬ್ಬಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದರು.
ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಕುಂಬಾರಪೇಟೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಐದು ಅಂತಸ್ತಿನ ಕಟ್ಟಡದಲ್ಲಿ 3 ಅಂತಸ್ತು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ನೀರು ಹಾಕಿದಷ್ಟು ಹೆಚ್ಚಾಗಿ ಬೆಂಕಿ ಉರಿಯುತ್ತಿತ್ತು.


