ಕುವೈತ್: ಕುವೈತ್ ನ ಮಂಗಾಫ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ.
ಕುವೈತ್ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 53 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ.
“ಈ ದುರಂತದಿಂದ ನಾವು ತೀವ್ರ ಆಘಾತಕ್ಕೊಳಗಾಗಿದ್ದೇವೆ” ಎಂದು ಇಎಎಂ ಡಾ.ಎಸ್.ಜೈಶಂಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕುವೈತ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ಅಗ್ನಿ ಅವಘಡದಲ್ಲಿ ಕೆಲವು ಭಾರತೀಯ ಕಾರ್ಮಿಕರು ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲಿದೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


