ದೆಹಲಿಯ ಬೇಬಿ ಕೇರ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ನವಜಾತ ಶಿಶುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. 12 ಶಿಶುಗಳನ್ನು ರಕ್ಷಿಸಲಾಗಿದ್ದು, ಅದರಲ್ಲಿ 6 ಶಿಶುಗಳು ಸಾವನ್ನಪ್ಪಿವೆ. ಅದೇ ಸಮಯದಲ್ಲಿ, 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ(ಮೇ 25) ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ, ಎಂದು ಸ್ವತಃ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 6 ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಏನು ಎಂಬ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


