ಬೆಂಗಳೂರು: ಮಾಗಡಿ ಮುಖ್ಯರಸ್ತೆಯ ಕಡಬಗೆರೆ ಕ್ರಾಸ್ ಬಸ್ ನಿಲ್ದಾಣ ಬಳಿ ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮೃತ ಯುವಕ ಉತ್ತರ ಭಾರತ ಮೂಲದ ಯುವಕನೆಂದು ತಿಳಿದು ಬಂದಿದ್ದು, ಮೃತನ ಗುರುತು ಪತ್ತೆಯಾಗಿಲ್ಲ. ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಲಗಿದ್ದರಲ್ಲೆ ಯುವಕ ಮೃತಪಟ್ಟಿದ್ದಾನೆ. ಯುವಕನ ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.