ಮಂಡ್ಯ: ನಾಮ ಹಾಕಿದ ಮಾತ್ರಕ್ಕೆ ಯಾರೂ ಹಿಂದೂ ಆಗುವುದಿಲ್ಲ, ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದರೆ ಮಾತ್ರ ಹಿಂದೂತ್ವ ಆಗುತ್ತದೆಯೇ? ಹಿಂದುತ್ವದಲ್ಲಿ ಒಂದು ಶಿಸ್ತಿದೆ, ಅನುಶಾಸನ ಇದೆ. ಅನುಶಾಸನ ಇಲ್ಲದಿದ್ದರೆ ಶಿಸ್ತಾಗುವುದಿಲ್ಲ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಸಂಬಂಧ ಅವರು ಪ್ರತಿಕ್ರಿಯೆ ನೀಡಿದರು.
ಹಿಂದುತ್ವವಾದಿ ಎಂದು ಏನು ಬೇಕಾದರೂ ಮಾತನಾಡುವುದಲ್ಲ. ಮಾತನಾಡುವಾಗ ಪ್ರಜ್ಞೆ ಇರಬೇಕು. ಮಾತಿನ ಮೇಲೆ ನಿಗಾವಹಿಸಬೇಕು ಎಂದರು.
ಒಂದು ಸಂಘಟನೆಯಲ್ಲಿದ್ದಾಗ ಮಾತು ಗಡಿ ಮೀರಿ ಹೋಗಬಾರದು. ಪಕ್ಷದ ಸಮಿತಿ ಒಳಗೆ ಮಾತನಾಡಬೇಕು. ಬೀದಿಯಲ್ಲಿ ಮಾತನಾಡುವುದು ಹಿಂದುತ್ವದ ಲಕ್ಷಣ ಅಲ್ಲ ಎಂದು ಭಟ್ ಪ್ರತಿಪಾದಿಸಿದರು.
ಹಿಂದುತ್ವದಲ್ಲಿ ಶಿಸ್ತು ಇದೆ. ಅದು ಇಲ್ಲದಿದ್ದರೆ ಹಿಂದುತ್ವವಾದಿ ಆಗಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತಿನಿಂದ ಇರದಿದ್ದರೆ ಇಂತಹ ಸಮಸ್ಯೆ ಆಗುತ್ತವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4