ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ಘೋರ ದುರಂತ ನಡೆದಿದ್ದು, ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ಕೃಷ್ಣಾನದಿಯಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟ ಘಟನೆ ನಡೆದಿದೆ.
ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.
ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ.
ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: