ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಶುಕ್ರವಾರ ಲಾಹೋರ್ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ರಹಮಾನ್ ಮಕ್ಕಿಗೆ ಕಳೆದ ಕೆಲವು ದಿನಗಳಿಂದ ಮಧುಮೇಹ ಹೆಚ್ಚಿತ್ತು. ನಂತರ ಆತನನ್ನ ಲಾಹೋರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ನ ಸೋದರ ಮಾವನಿಗೆ 2020 ರಲ್ಲಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx