ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.
ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ ಎಂಬಲ್ಲಿರುವ ಮಸೀದಿಯಲ್ಲಿ ಉಗ್ರರು ಗುಂಡಿನ ದಾಳಿ ವೇಳೆ ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಅವರು ಗಂಭೀರವಾಗಿ ಗಾಯಗೊಂಡು, ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನಡುವೆ ದಾಳಿ ನಡೆಸಿದ ಉಗ್ರರು ಸ್ಥಳದಿಂದ ಕಾಲ್ಕಿತ್ತು, ಉಗ್ರರ ಸದೆಬಡಿಯು ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.


