ನಿತ್ಯ ಸರಾಸರಿ ಒಂದು ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ. ರಾಮಮಂದಿರ ನಿರ್ಮಾಣದ ಬಳಿಕ ಅಯೋಧ್ಯೆಯು ದೇಶದ ಪ್ರಮುಖ ಯಾತ್ರಾಸ್ಥಳವಾಗಿ ಬದಲಾಗಿದೆ. ಇದರ ಬೆನ್ನಲ್ಲೇ, ರಾಮಮಂದಿರವನ್ನು ಸ್ಫೋಟಿಸುವ ಕುರಿತು ಉಗ್ರರು ಬೆದರಿಕೆ ಹಾಕಿದ್ದಾರೆ.
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು (Ram Mandir) ಸ್ಫೋಟಿಸಲಾಗುವುದು ಎಂದು ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ.
ರಾಮಮಂದಿರ ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್ ಉಗ್ರರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಮಮಂದಿರ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿಗಳ ಮೂಲಕ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಕೂಡ ಅಯೋಧ್ಯೆಯಲ್ಲಿ ಹೆಚ್ಚು ಅಲರ್ಟ್ ಆಗಿವೆ. ಅಯೋಧ್ಯೆಯ ಇಂಚಿಂಚೂ ಪ್ರದೇಶದ ಮೇಲೆ ಭದ್ರತಾ ಸಿಬ್ಬಂದಿಯು ನಿಗಾ ಇರಿಸಿದ್ದಾರೆ. ವಾಹನಗಳ ತಪಾಸಣೆಯೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA