ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ದಾಸ್ತುನು ಮೇಲೆ ದಾಳಿ ಮಾಡಿರೋ ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ಕುಕ್ಕರ್ ವಶಕ್ಕೆ ತೆಗೆದುಕೊಂಡಿದ್ದಾರೆ. ಕುಣಿಗಲ್ ಪಟ್ಟಣದ 22ನೇ ವಾರ್ಡ್ ನ ಮಲ್ಲಿ ಪಾಳ್ಯದಲ್ಲಿ ಘಟನೆ ನಡೆದಿದ್ದು, ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿ ಕುಕ್ಕರ್ ಗಳ ಸಂಗ್ರಹ ಮಾಡಲಾಗಿತ್ತು.

ಜೆಡಿಎಸ್ ಕಾರ್ಯಕರ್ತರ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿ, 80ಕ್ಕೂ ಹೆಚ್ಚು ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಂಸದ ಡಿ.ಕೆ ಸುರೇಶ್, ಶಾಸಕ ಡಾ. ರಂಗನಾಥ್ ಭಾವಚಿತ್ರವಿರುವ ಕುಕ್ಕರ್ ಬಾಕ್ಸ್ ಗಳನ್ನು ಟಿಸಿ ರಿಪೇರಿ ಮಾಡುವ ಗೋದಾಮಿನಲ್ಲಿ ಇರಿಸಲಾಗಿತ್ತು.

ಮಧ್ಯಾಹ್ನ ಕುಕ್ಕರ್ ಕೇಳಿದ್ದ ಮಹಿಳೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದ ಆರೋಪ ಕೇಲಿ ಬಂದಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕುಣಿಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ರಿಂದ ಹಂಚಲಾಗುತ್ತಿರುವ ಕುಕ್ಕರ್ ಎಂಬ ಆರೋಪ ವ್ಯಕ್ತವಾಗಿದ್ದು, ಕುಕ್ಕರ್ ಗಳನ್ನು ವಶಕ್ಕೆ ಪಡೆದು ಚುನಾವಣಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


