nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಹಸೀಲ್ದಾರ್ ಮೇಲೆ ಬಿತ್ತು ಎಫ್.ಐ.ಆರ್. | ಏನಿದು ಪ್ರಕರಣ?
    ತುಮಕೂರು January 29, 2022

    ತಹಸೀಲ್ದಾರ್ ಮೇಲೆ ಬಿತ್ತು ಎಫ್.ಐ.ಆರ್. | ಏನಿದು ಪ್ರಕರಣ?

    By adminJanuary 29, 2022No Comments2 Mins Read
    tejaswini b

    ತುಮಕೂರು: ಚಿಕ್ಕನಾಯಕನಹಳ್ಳಿಯ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು ಅತ್ಯಂತ ಹಿಂದುಳಿದ ವರ್ಗಗಳಾದ ಅಲೆಮಾರಿ ಜನಾಂಗ ಸುಡುಗಾಡು ಸಿದ್ದರು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ನಮಗೆ ಕೊಡುವಂತೆ ಮತ್ತು  ಪರಿಹಾರಗಳನ್ನು ಒದಗಿಸುವಂತೆ ತಹಸೀಲ್ದಾರ್ ಕಚೇರಿಗೆ ತೆರಳಿ  ಕೇಳಲು ಹೋದಾಗ ನಿಂದಿಸಿ ಕಚೇರಿಯಿಂದ ಹೊರದಬ್ಬಿರುವ ಘಟನೆ ಇದೀಗ ತೀವ್ರತೆ ಪಡೆದುಕೊಂಡಿದೆ.

    ತಹಸೀಲ್ದಾರ್ ತೇಜಸ್ವಿನಿ  ಬಿ. ಅವರು, ನ್ಯಾಯ ಕೇಳಲು ಬಂದಿದ್ದ ಅಮಾಯಕ, ಅನಕ್ಷರಸ್ಥ ಹಿಂದುಳಿದ ವರ್ಗದ ಜನರನ್ನು ಪೋಲಿಸ್ ಕರೆಸಿ ಕಚೇರಿಯಿಂದ ಹೊರ ನೂಕಲು ಪ್ರಯತ್ನಿಸಿ, ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಲ್ಲದೇ ರೌಡಿಶೀಟರ್ ಹಾಕುವುದಾಗಿ, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಗಳನ್ನು  ಬ್ಲಾಕ್ ಮಾಡಿ ಹೇಳಿ ಗಡಿಪಾರು ಮಾಡುವ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.


    Provided by
    Provided by

    ತಹಸೀಲ್ದಾರ್ ವರ್ತನೆಯಿಂದ ನೊಂದ  ವ್ಯಕ್ತಿಗಳು ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ  ಅವರನ್ನು ಸಂಪರ್ಕಿಸಿದ್ದು, ಅವರ ನೇತೃತ್ವದಲ್ಲಿ ತೇಜಸ್ವಿ ಬಿ. ಅವರ ಮೇಲೆ ಅಟ್ರಾಸಿಟಿ ಕೇಸು ದಾಖಲಿಸಲು ಪೊಲೀಸ್ ಠಾಣೆ, ಡಿವೈಎಸ್ಪಿ ಕಚೇರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ, ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಹತ್ತು ಹಲವು ಕಚೇರಿಗಳನ್ನು ಒಂದು ತಿಂಗಳಿಗೂ ಹೆಚ್ಚು ಕಾಲ  ಸುತ್ತಿ ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾಗಿದೆ.

    ಇದೀಗ ತಹಶೀಲ್ದಾರ್ ತೇಜಸ್ವಿನಿ ಬಿ.  ಅವರ ಮೇಲೆ ಎಫ್ ಐ ಆರ್   ದಾಖಲಾಗಿದ್ದು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಜನಾಂಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 2015ರ ಪ್ರಕಾರ,  ಪ್ರಕರಣ ದಾಖಲಾದ ತಕ್ಷಣ  ತಹಸೀಲ್ದಾರ್ ರವರು ರಜೆಯ ಮೇಲೆ ತೆರಳಿರುವ ಘಟನೆ ನಡೆದಿದೆ.

     ಈ ಪ್ರಕರಣದ ತನಿಖಾಧಿಕಾರಿ ಡಿಎಸ್ಪಿ ತಿಪಟೂರು ಇವರು ತೇಜಸ್ವಿನಿ ಬಿ. ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸುವ ಪ್ರಕ್ರಿಯೆ ಮಾಡಬೇಕಾಗಿದ್ದರೂ ಇನ್ನೂ ಮೌನಕ್ಕೆ ಶರಣಾಗಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

     ಸರ್ಕಾರದ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ  ವ್ಯಕ್ತಿಗಳಿಗೆ ತಲುಪಿಸುವಲ್ಲಿ ಕರ್ತವ್ಯಲೋಪ ಮತ್ತು ಅಧಿಕಾರ ದುರುಪಯೋಗ ಪಡಿಸಿಕೊಂಡು ದೌರ್ಜನ್ಯಗಳಿಂದ ಆಡಳಿತ ನಡೆಸುತ್ತಿರುವುದು ಖಂಡಿಸಿರುವ  ಹಿರಿಯ ಸಾಮಾಜಿಕ ಹೋರಾಟಗಾರರಾದ ಹೆಚ್ ಎಂ. ವೆಂಕಟೇಶರವರು ವಿಷಾದ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಕಾನೂನುಗಳನ್ನು ಪಾಲನೆ ಮಾಡುವ ಮೂಲಕ ನೊಂದವರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.