ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.
ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ. ಅವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದರು.
ಈ ದೇಶದ ಪ್ರಧಾನಿ ಆರ್ ಎಸ್ ಎಸ್ ನಿಂದ ಬಂದವರು, ರಾಷ್ಷ್ರಪತಿ ಆರ್ ಎಸ್ ಎಸ್ ನಿಂದ ಬಂದವರು, ನಾವೆಲ್ಲರೂ ಆರ್ ಎಸ್ ಎಸ್ ನಿಂದ ಬಂದವರಾಗಿದ್ದೇವೆ. ಸಿದ್ದರಾಮಯ್ಯನವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


