ಹಿರಿಯೂರು: ತಾಲ್ಲೂಕು ಪಂಚಾಯತಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು.
ಹಿರಿಯೂರು ತಾಲೂಕಿಗೆ ಸುಸಜ್ಜಿತವಾದ ನೂತನ ತಾಲೂಕು ಪಂಚಾಯಿತಿ ಕಟ್ಟಡವನ್ನು ಆದಿವಾಲ ಗ್ರಾಮದ ಮುರುಗನ್ ದೇವಸ್ಥಾನದ ಹತ್ತಿರ 3,52,00,000 ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಪೂರ್ಣಿಮಾ ಶ್ರೀನಿವಾಸ್, ನಿರ್ಮಾಣ ಹಂತದಲ್ಲಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಕುರಿತು ಪ್ರಸ್ತಾಪಿಸಿ, 25 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಸದ್ಯದಲ್ಲಿಯೇ ಕಾಮಗಾರಿ ಪೂರ್ಣಗೊಳ್ಳಲಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
ಹಿರಿಯೂರು ತಾಲ್ಲೂಕಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ವ್ಯವಸ್ಥೆ ಬಗ್ಗೆಯೂ ಈಗಾಗಲೇ ಸಂಬಂಧ ಪಟ್ಟ ಸಚಿವರ ಬಳಿ ಹಾಗೂ ಸರ್ಕಾರದಲ್ಲಿ ಈಗಾಗಲೇ ಚರ್ಚಿಸಿದ್ದೇನೆ ಎಂದು ತಿಳಿಸಿದ ಅವರು, ಕಳೆದ ನಾಲ್ಕುವರೆ ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರವರ್ಗ 01ರ ರಾಜ್ಯಾಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್, ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು , ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


