ತಮಿಳುನಾಡಿನಲ್ಲಿ ಆನ್‌ಲೈನ್ ರಮ್ಮಿಯನ್ನು ನಿಷೇಧಿಸುವ ಮಸೂದೆಗೆ ರಾಜ್ಯಪಾಲ ಆರ್‌ಎನ್ ರವಿ ಅನುಮೋದನೆ. ಆನ್‌ಲೈನ್ ರಮ್ಮಿ ಆಡಿದರೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು 5000 ರೂಪಾಯಿ ದಂಡ ವಿಧಿಸುವ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ರಾಜ್ಯಪಾಲರ ವಿರುದ್ಧ ವಿಧಾನಸಭೆ ನಿರ್ಣಯ ಅಂಗೀಕರಿಸಿದ ಬಳಿಕ ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕಿದ್ದಾರೆ.
ಮಾರ್ಚ್ 23 ರಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸಂಪುಟವು ರಾಜ್ಯದಲ್ಲಿ ಈ ಆಟಗಳನ್ನು ನಿಷೇಧಿಸುವ ಮಸೂದೆಯನ್ನು ಮತ್ತೊಮ್ಮೆ ಅಂಗೀಕರಿಸಿದ ಕೆಲವು ವಾರಗಳ ನಂತರ ರಾಜ್ಯಪಾಲರು ಮಸೂದೆಗೆ ಸಹಿ ಹಾಕಿದ್ದಾರೆ.
ರಾಜ್ಯಪಾಲ ಆರ್.ಎನ್.ರವಿ ಅವರು ಮಾರ್ಚ್ 8ರಂದು ಈ ವಿಧೇಯಕವನ್ನು ವಾಪಸ್ ಕಳುಹಿಸಿದ್ದರು. ನಂತರ ಹಲವು ವಿವಾದಗಳು ಮತ್ತು ಟೀಕೆಗಳ ನಂತರ ಅವರು ಮಸೂದೆಗೆ ಸಹಿ ಹಾಕಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


