ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಮಾರಾಮಾರಿ ನಡೆದಿದ್ದು, ಇದೀಗ ಅಬ್ಬಿನಹೊಳೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮಾರಾಮಾರಿ ನಡೆದಿದ್ದು, ಪರಿಣಾಮವಾಗಿ ನಾಗಮ್ಮ, ಗೌರಮ್ಮ, ಶ್ರೀದೇವಿ ಎಂಬವರು ಗಾಯಗೊಂಡಿದ್ದು, ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಗಮ್ಮ (45) ಎಂಬವರಿಗೆ ತಲೆಗೆ , ಬಾಯಿಗೆ, ಏಟು ಬಿದ್ದಿದ್ದು, ಎಡಗೈ ಮುರಿದಿದೆ. ಕಾಲಿಗೂ ಪೆಟ್ಟಾಗಿದೆ. ಗೌರಮ್ಮ (48) ಅವರಿಗೆ ಕಾಲಿಗೆ ಗಾಯವಾಗಿದ್ದು, ಎರಡು ಕಾಲು ಸಹ ಓಡಾಡುವುದಕ್ಕೆ ಆಗದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀದೇವಿ (29) ಇವರಿಗೆ ಬಲಗೈ ಗೆ ಹೊಡೆದಿದ್ದು, ಬಲಗೈ ಬೆನ್ನು ಮೂಲೆ ಗಂಭೀರ ಸ್ಥಿತಿಯಲ್ಲಿದೆ. ಇದೀಗ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋಡಿಹಳ್ಳಿ ಗ್ರಾಮದ ಗುಡ್ಡದ ಗೊಲ್ಲರಹಟ್ಟಿ ಗ್ರಾಮದ ಚಿತ್ತಯ್ಯ, ಚಂದ್ರ, ಶಾರದಾ, ಉಮಾದೇವಿ, ಕಾಂತರಾಜು, ಜೈಲಿಂಗಪ್ಪ, ತಿಪ್ಪೇಸ್ವಾಮಿ, ರಘು, ವಸಂತ , ಮಮತ, ಸುಜಾತ ಕುಟುಂಬದ ನಡುವೆ ಈ ಮಾರಾಮಾರಿ ನಡೆದಿದೆ ಎನ್ನಲಾಗಿದೆ.
ಘಟನೆ ಸಂಬಂಧ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಅಬ್ಬಿನಹೊಳೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಂತಹ ಅಬ್ಬಿನಹೊಳೆ ಗ್ರಾಮಾಂತರ ಪೋಲಿಸ್ ಠಾಣೆಯ ತೀವ್ರವಾಗಿ ಪೆಟ್ಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗಮ್ಮ, ಗೌರಮ್ಮ , ಶ್ರೀದೇವಿ ಇವರುಗಳ ಹೇಳಿಕೆ ಪಡೆದುಕೊಂಡಿದ್ದು, ಇದೀಗ ಮುಂದಿನ ಕ್ರಮಕ್ಕೆ ಅಬ್ಬಿನ ಹೊಳೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪೋಲಿಸರು ತನಿಖೆ ಆರಂಭಿಸಿದ್ದಾರೆ.
ಕೋಡಿಹಳ್ಳಿ ಗ್ರಾಮದ ರಿ ಸರ್ವೆ ನಂ: 41ರಲ್ಲಿ 3-19 ಎಕರೆ ಗುಂಟೆ ಜಮೀನು ಸುಮಾರು ಇಪ್ಪತ್ತು ಮೂವತ್ತು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದ ಜಮೀನಿಗೆ ಸಂಬಂಧ ಪಟ್ಟಂತೆ ತಕರಾರು ಸಲ್ಲಿಸಿ ದ್ದ ಗೌರಮ್ಮ ಪರವಾಗಿ ನ್ಯಾಯಾಲಯ ಆದೇಶ ನೀಡಿತ್ತು ಎನ್ನಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ.
ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz