ತಂದೆಗೆ ಪೊಲೀಸ್ ಕಾನ್ ಸ್ಟೇಬಲ್ ಹಲ್ಲೆ ಮಾಡುತ್ತಿರುವುದನ್ನು ನೋಡಿ ತಡೆಯಲು ಆಗದ ಕಾರಣ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.
ಛತ್ತೀಸ್ ಘಡದ ಬಿಲಾಸ್ ಪುರ್ ಜಿಲ್ಲೆಯಲ್ಲಿ ಬಿನ್ಸ್ ಬೋಡ್ ಗ್ರಾಮದ ನಿವಾಸಿ 23 ವರ್ಷದ ಹರೀಶ್ ಚಂದ್ರ ಜಿಂಡ್ಲೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಹರೀಶ್ ಚಂದ್ರ ಜಿಂಡ್ಲೆ ಬೈಕ್ ಬಾಲಕಿಯೊಬ್ಬಳಿಗೆ ಡಿಕ್ಕಿ ಹೊಡೆದಿತ್ತು. ಈ ಸಂಬಂಧ ಶಾಲಾ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಮನೆಗೆ ಭೇಟಿ ನೀಡಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಅಲ್ಲದೇ ತಂದೆಯನ್ನು ಠಾಣೆಗೆ ಕರೆದೊಯ್ದಿದ್ದರು.
ಹರೀಶ್ ಚಂದ್ರ ಪೊಲೀಸ್ ಠಾಣೆಗೆ ಹೋದಾಗ ಪೊಲೀಸ್ ಕಾನ್ ಸ್ಟೇಬಲ್ ತಂದೆಯನ್ನು ಥಳಿಸುತ್ತಿದ್ದರು. ಇದನ್ನು ನೋಡಿದ ಕೂಡಲೇ ರೈಲ್ವೆ ನಿಲ್ದಾಣಕ್ಕೆ ಹೋಗಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೊಲೀಸರು ಸಣ್ಣ ಪ್ರಕರಣದಲ್ಲಿ ಕೀಳಾಗಿ ನಡೆದುಕೊಂಡಿದ್ದಾರೆ. ಅಪಘಾತ ಪ್ರಕರಣದಲ್ಲಿ ಅವನ ಪಾತ್ರ ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳದೇ ಮನೆಯವರಿಗೆ ಹಿಂಸೆ ನೀಡಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy