ತುಮಕೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಪ್ಪು ಮಾಡಿರದಿದ್ದರೆ ಆರೋಪ ಮುಕ್ತರಾಗಿ ಹೊರ ಬರುತ್ತಾರೆ. ಆರೋಪ ಸಾಬೀತಾದರೆ ಸಹಜವಾಗಿ ಶಿಕ್ಷೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಇಡಿ ಅಧಿಕಾರಿಗಳಿಗೆ ಅನುಮಾನ ಬಂದವರ ವಿರುದ್ಧ ತನಿಖೆ ಮಾಡುತ್ತಾರೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ. ರಾಹುಲ್ ಗಾಂಧಿ, ಯಡಿಯೂರಪ್ಪ ಬೇರೆ, ಬೇರೆ ಎಂಬ ಪ್ರಶ್ನೆಯೇ ಇಲ್ಲ. ತನಿಖೆ ನಡೆಯುತ್ತಿದೆ ಏನಾಗುತ್ತದೆ ಎಂಬುವುದನ್ನು ಕಾದು ನೋಡೋಣ’ ಎಂದರು.
ಅನೇಕರು ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ.ಬಿಜೆಪಿಗೆ ಬರುವವರನ್ನು ಬೇಡ ಅಂತ ಹೇಳುವುದಿಲ್ಲ. ಪಕ್ಷ ಸೇರ್ಪಡೆಯಾಗುವವರಿಗೆ ಯಾವ ಸ್ಥಾನ ನೀಡಬೇಕು ಎನ್ನುವುದನ್ನುಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ. ಪಕ್ಷ ಬಲಪಡಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇವೆ. ಹೊಸದಾಗಿ ಲೋಕಾಯುಕ್ತರು ನೇಮಕವಾಗಿದ್ದಾರೆ. ಅವರು ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB