ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ ಮಾಡಿ ಲೋಕಾಯುಕ್ತಕ್ಕೆ ದೂರು ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ದೂರು ದಾಖಲಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಇಂದು ಮಾತಾನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಅನಗತ್ಯವಾಗಿ ಆರೋಪ ಮಾಡುವುದು ಸಾಮಾನ್ಯವಾಗಿದೆ. ಕಿಕ್ ಬ್ಯಾಕ್ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ತನಿಖೆ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ. ತನಿಖೆ ನಂತರ ಅವರದಾಗಲಿ ನಮ್ಮದಾಗಲಿ ಗೊತ್ತಾಗಲಿದೆ ಎಂದರು.
ಭಾರತ ಜೋಡೊ ಯಾತ್ರೆ ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


