ಸರ್ಕಾರಿ ಶಾಲೆಯ ತರಗತಿಯೊಳಗೆ ಇಬ್ಬರು ಹುಡುಗರು ತಮ್ಮ 13 ವರ್ಷದ ಕ್ಲಾಸ್ ಮೇಟ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಮುಂಬೈನ ಮಾಟುಂಗಾ ಪ್ರದೇಶದಲ್ಲಿ ದಾಖಲಾಗಿದೆ. ಕೆಲವು ದಿನದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ನೃತ್ಯ ಅಭ್ಯಾಸಕ್ಕಾಗಿ ಹೊರಬಂದಾಗ ಆಕೆಯ ಇಬ್ಬರು ಕ್ಲಾಸ್ ಮೇಟ್ಸ್ ಗಳು 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮಾಟುಂಗಾ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.
ಹುಡುಗಿ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದು, ಪೋಷಕರು ತಕ್ಷಣ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy