ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸ್ ಬರಲ್ಲ ಎಂದು ಹೇಳಿದ್ದಕ್ಕೆ ಹೆಂಡತಿ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ.
ಸೆಪ್ಟೆಂಬರ್ 11 ರಂದು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಕರೆಯಲು ಹೋಗಿದ್ದ ವೇಳೆ ಗಂಡನೇ ಮೇಲೆ ಫೈರಿಂಗ್ ಮಾಡಿದ್ದಾನೆ. ಗುಂಡು ಹಾರಿಸಿದ ಶಿವಾನಂದನನ್ನು ಪೊಲೀಸರು ಬಂಧಿಸಿದ್ದಾರೆ.
4 ವರ್ಷದ ಹಿಂದೆ ಶಿವಾನಂದ, ಪ್ರೀತಿ ಮದುವೆಯಾಗಿತ್ತು. ಆದರೆ ಗಂಡ ಶಿವಾನಂದನ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪ್ರೀತಿ ತವರು ಮನೆ ಸೇರಿದ್ರು.
ಸೆಪ್ಟೆಂಬರ್ 11 ರ ರಾತ್ರಿ ಪ್ರೀತಿ ಅವರ ತವರು ಮನೆಗೆ ಬಂದ ಶಿವಾನಂದ ತನ್ನ ಜೊತೆಗೆ ಬರುವಂತೆ ಪಟ್ಟು ಹಿಡಿದಿದ್ದಾನೆ. ಆದರೆ ಪತ್ನಿ ಪ್ರೀತಿ ನಿನ್ನೆ ಜೊತೆಗೆ ಬರಲ್ಲ ಎಂದು ಹೇಳಿದಾಗ ಪಿಸ್ತೂಲ್ ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಹೆಂಡತಿ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy