ಮಧುಗಿರಿ : ಹೆರಿಗೆಗೆ ಬಂದಿದ್ದ ಗರ್ಭಿಣಿ ಮಹಿಳೆ ವೈದ್ಯರಿಲ್ಲದ ಕಾರಣ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದೇ ಸಾವಿಗೀಡಾಗಿರುವ ಘಟನೆ ನಡೆದಿದ್ದು, ತಾಯಿ ಮಗು ಇಬ್ಬರೂ ಬಲಿಯಾಗಿದ್ದಾರೆ.
ಮಿಡಿಗೇಶಿ ಹೋಬಳಿ ಬ್ರಹ್ಮದೇವರಹಳ್ಳಿ ಗ್ರಾಮದ ವಾಸಿ ಕಮಲಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ಹೊಸಕೆರೆ ಆಸ್ಪತ್ರೆಗೆ ಹೆರಿಗೆಗೆ ಬಂದಿದ್ದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎನ್ನಲಾಗಿದೆ.
ವೈದ್ಯರಿಲ್ಲದ ಕಾರಣ ನರ್ಸ್ ಗಳೇ ಚಿಕಿತ್ಸೆ ನೀಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸಿದಾಗ ತಾಲೂಕು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಗಿದೆ. ಆದರೆ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಕೂಡ ಲಭ್ಯವಾಗಲಿಲ್ಲ ಎನ್ನಲಾಗಿದೆ. ಬಹಳಷ್ಟು ಸಮಯಗಳ ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ದಾರಿ ಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವೈದ್ಯರಿಲ್ಲದ ಕಾರಣ ತಾಯಿ ಹಾಗೂ ಮಗು ಸಾವನ್ನಪ್ಪಿದೆ. ಸೂಕ್ತ ಸಮಯಕ್ಕೆ ವೈದ್ಯರು ಲಭ್ಯವಾಗದ ಕಾರಣದಿಂದಾಗಿ ತಾಯಿ ಮಗು ಇಬ್ಬರೂ ಸಾವಿಗೀಡಾಗುವಂತಾಯಿತು ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB