ಮಧುಗಿರಿ: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ, ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಹೋಬಳಿ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ನಡೆದಿದೆ. ಅಪಘಾತಕ್ಕೆ ಬಲಿಯಾದವರು ವಾಟದ ಹೊಸಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಮಹೇಂದ್ರ 36 ಮೃತಪಟ್ಟವರೆಂದು ಗುರುತಿಸಲಾಗಿದೆ. ಚರಣ್ ಹಾಗೂ ಅನಿಲ್ ಗಾಯಗೊಂಡವರಾಗಿದ್ದಾರೆ. ವಿಷಯ ತಿಳಿದ ಕೂಡಲೇ ಕೊಡಿಗೇನಹಳ್ಳಿ P S I ಶ್ರೀನಿವಾಸ್ ಪ್ರಸಾದ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296