ಶ್ರೀ ರಾಮನವಮಿಯ ಅಂಗವಾಗಿ ಎಲ್ಲಿ ನೋಡಿದರೂ, ಯಾವ ದೇವಸ್ಥಾನದಲ್ಲಿ ನೋಡಿದರೂ ಶ್ರೀರಾಮನಿಗೆ ವಿಶೇಷ ಹೂವಿನ ಅಲಂಕಾರದೊಂದಿಗೆ ಪೂಜೆ ಪುರಸ್ಕಾರಗಳು ಕಂಡು ಬಂದಿದೆ.

ಸುಮಾರು 40 ವರ್ಷದಿಂದ ಪ್ರತಿ ಹಬ್ಬದಲ್ಲೂ ವಿಶೇಷ ಪೂಜೆ ಪುರಸ್ಕಾರಗಳನ್ನ ಸಲ್ಲಿಸುತ್ತಾ ಬಂದಿರುವ ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ರಾಮ ನವಮಿ ಆಚರಣೆ ಮಾಡಲಾಯಿತು.
ಕೊರಟಗೆರೆ ಪಟ್ಟಣದ ಶ್ರೀ ಗುಂಡಾ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಭಕ್ತಾದಿಗಳಿಗೆ ಪಾನಕ ಮಜ್ಜಿಗೆ ಕೋಸಂಬರಿ ಹಾಗೂ ವಿಶೇಷ ಪ್ರಸಾದವನ್ನ ಶ್ರೀ ರಾಮನ ಭಕ್ತರು ವಿತರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಭಕ್ತಾದಿಗಳು, “ದೇವಸ್ಥಾನದ ಹುಂಡಿಗಳ ಹಣ ತೆಗೆದುಕೊಂಡು ಹೋಗುವ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ, ದೇವಸ್ಥಾನಕ್ಕೆ ಬೇಕಾಗಿರುವ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಿರಲಿ, ಏನು ಆಗಬೇಕು ಎಂದು ಕೇಳುವ ಸೌಜನ್ಯವು ಅವರಿಗೆ ಇಲ್ಲ” ಎಂದರು.
ಇಡೀ ರಾಜ್ಯದಲ್ಲಿ ಹಿಂದೂ ದೇವಾಲಯಗಳ ಅಭಿವೃದ್ಧಿ ಮರೀಚಿಕೆ ಆಗುತ್ತಿವೆ. ಇತಿಹಾಸ ಪ್ರಸಿದ್ಧ ಹಿಂದೂ ದೇವಾಲಯಗಳು ಕಣ್ಮರೆಯಾಗುತ್ತಿವೆ. ಇದಕ್ಕೆಲ್ಲ ಕಾರಣ ಮುಜರಾಯಿ ಇಲಾಖೆಯ ನಿರ್ಲಕ್ಷ ಎಂದು ಭಕ್ತಾದಿಗಳು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಎಲ್ಲ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


