ತುಮಕೂರು: ತುಮಕೂರು ನಗರದಲ್ಲಿ ಹೆಚ್ಚಿದ ಪುಂಡರ ಹಾವಳಿ ಹೆಚ್ಚಾಗಿದ್ದು, ಬ್ಲೇಡ್ ಮಚ್ಚಿನಿಂದ ದಾಳಿ ಮಾಡಲಾಗುತ್ತಿದೆ. ಇದೀಗ ಹಿಡಿಯಲು ಹೋದ ಪೊಲೀಸರ ಮೇಲೆಯೂ ಪುಂಡರು ಹಲ್ಲೆ ಯತ್ನ ನಡೆಸಿದ್ದಾರೆ.
ತುಮಕೂರು ನಗರದ ಪಿ.ಎಚ್ ಕಾಲೋನಿಯ ಅಜಾದ್ ಪಾರ್ಕ್ ಬಳಿ ಘಟನೆ ನಡೆದಿದ್ದು ಗುರುವಾರ ರಾತ್ರಿ 8.30ರ ಸಮಯದಲ್ಲಿ ಆರೋಪಿ ಸಾಜಿದ್ ಹಾಗೂ ಸ್ನೇಹಿತರಿಂದ ಹಲ್ಲೆ ಮಾಡಲಾಗಿದೆ.
ಮಹಮದ್ ರಫೀಕ್ ಎಂಬುವರ ಮೇಲೆ ಬ್ಲೇಡಿನಿಂದ ಹಲ್ಲೆ ನಡೆಸಿದ ಆರೋಪಿಗಳು. ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದ ಮಹಮದ್ ರಫೀಕ್ ಎಂಬುವರ ಮೇಲೆ ದಾಳಿಯಾಗಿದ್ದು, ಏಕಾಏಕಿ ದಾಳಿ ನಡೆಸಿ ಬ್ಲೇಡಿನಿಂದ ಹಲ್ಲೆ ಮಾಡಿದ ಪುಂಡರ ಗುಂಪು ಸ್ಥಳದಿಂದ ಪರಾರಿಯಾಗಿದೆ.
ಕೂಡಲೇ ತಿಲಕ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು, ಈ ವೇಳೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾರೆ.
ನಂತರ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


