ಮುಂಬೈ: ವ್ಯಕ್ತಿಯೊಬ್ಬ ಇಬ್ಬರು ಹಿರಿಯ ನಾಗರೀಕರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ನಂತರ ಅರಣ್ಯ ಪ್ರದೇಶದಲ್ಲಿರುವ ಕೊಳಚೆ ಗುಂಡಿಯಲ್ಲಿ ಅವಿತುಕೊಂಡಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಡಬಲ್ ಮರ್ಡರ್ ಮಾಡಿದ ಆರೋಪಿಯನ್ನು ಕಿಶೋರ್ ಕುಮಾರ್ ಮಂಡಲ್ ಎಂದು ಗುರುತಿಸಲಾಗಿದ್ದು, ಈತನು ಒಬ್ಬ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಈತ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ಬೋಯಿಸರ್ ನ ಕೂಡನ್ ಎಂಬ ಕುಗ್ರಾಮದಲ್ಲಿ ಜೋಡಿ ಕೊಲೆ ಮಾಡಿದ್ದಾನೆ. ಇಬ್ಬರು ಹಿರಿಯ ನಾಗರೀಕರನ್ನು ಕೊಡಲಿಯಿಂದ ಕೊಚ್ಚಿ ಕ್ರೂರವಾಗಿ ಕೊಂದಿದ್ದಾನೆ.
ಕೊಲೆ ನಡೆಯುತ್ತಿದ್ದ ಸ್ಥಳದಲ್ಲಿ ಜನರು ಜಮಾಯಿಸುತ್ತಿದ್ದಂತಯೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು.
ಇತ್ತ ಆರೋಪಿ ಅರಣ್ಯ ಪ್ರದೇಶವೊಂದರ ಕೊಳಚೆ ಗುಂಡಿಯಲ್ಲಿ ಅಡಗಿ ಕುಳಿತಿರುವ ಮಾಹಿತಿ ಸಿಕ್ಕಿದೆ. ತಕ್ಷಣವೇ ಅಲೆರ್ಟ್ ಆದ ಫಾಲ್ಗರ್ ಪೊಲೀಸರು ಆತನನ್ನು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


