ಬೆಂಗಳೂರು: ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಆರೋಪಿಯಿಂದ 225 ಕೆ. ಜಿ ಗಾಂಜಾ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಲಾರಿ ಸ್ಟ್ಯಾಂಡ್ ಬಳಿ ಬರುತ್ತಿದ್ದ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಿದಾಗ ಆಟೋದಲ್ಲಿ ಚಾಕಲೇಟ್ ಗಳು ತುಂಬಿದ್ದ ಚೀಲಗಳಿರುವುದು ಕಂಡುಬಂದಿದೆ.
‘ಶಾಲೆ-ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪನಿ ನೌಕರರು, ಕೂಲಿ ಕಾರ್ಮಿಕರು ಹಾಗೂ ಇತರರು ಚಾಕೊಲೇಟ್ ಖರೀದಿಸುತ್ತಿದ್ದರು. ಕ್ರಮೇಣ ಅವರೆಲ್ಲರೂ ಗಾಂಜಾ ವ್ಯಸನಿಗಳಾಗಿ ಬದಲಾಗುತ್ತಿದ್ದರು’ ಎಂದು ಹೇಳಿದರು.
`’ಆರೋಪಿ ಶಮೀನ್ ಜೊತೆ ಮತ್ತಷ್ಟು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಅವರೆಲ್ಲ ತಲೆಮರೆಸಿಕೊಂಡಿದ್ದಾರೆ. ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.


