ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ, ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಮೈತ್ರಿ ಪಕ್ಷಗಳ ಸಮನ್ವಯ ಸಭೆ ಸಂದರ್ಭದಲ್ಲಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಬಹಳ ಹಿಂದೆನೇ ಆಗಬೇಕಿತ್ತು. ಕಾರಣಾಂತರದಿಂದ ಸಭೆ ಇಂದು ನಿರ್ಧಾರವಾಗಿದೆ. ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಒಂದೇ ವೇದಿಕೆಗೆ ಬಂದಿದ್ದೇವೆ” ಎಂದರು.
“ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಬಲ ಬಂದಂತೆ ಆಗಿದೆ. ಮಂಡ್ಯ ಹಾಗೂ ಮೈಸೂರಲ್ಲಿ ನಾನು, ಕುಮಾರಸ್ವಾಮಿ ಜಂಟಿ ಪ್ರವಾಸ ಮಾಡಿದ್ದೇವೆ. ಬಹಳಷ್ಟು ಸಲ ಹೊಂದಾಣಿಕೆ ರಾಜಕೀಯ ನಡೆದಿದೆ. ಬಿಜೆಪಿ-ಜೆಡಿಎಸ್ ಹಾಗೂ ಜೆಡಿಎಸ್-ಕಾಂಗ್ರೆಸ್ ಸಾಕಷ್ಟು ಸಲ ಹೊಂದಾಣಿಕೆಯಾಗಿದೆ. ಈ ಸಮ್ಮಿಲನ ರಾಜ್ಯದ ಜನರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ” ಎಂದರು.
ಬಿಜೆಪಿ-ಜೆಡಿಎಸ್ ಸಮ್ಮಿಲನದಿಂದ ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಕೆಲಸ ಆಗುತ್ತದೆ. ಜೆಡಿಎಸ್-ಎನ್ಡಿಎ ಕೂಟಕ್ಕೆ ಬಂದಿರುವುದನ್ನು ನಮ್ಮ ನಾಯಕರು ಘೋಷಣೆ ಮಾಡಿ ಹಲವು ತಿಂಗಳು ಆಗಿವೆ. ರಾಜ್ಯದ ಮತದಾರರು ಮೈತ್ರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


