ಗದಗ: ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ(27), ಪರಶುರಾಮ(55) ಪತ್ನಿ ಲಕ್ಷ್ಮಿ(45), ಪುತ್ರಿ ಆಕಾಂಕ್ಷಾ(16) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಕೊಲೆ ಮಾಡಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಮೃತ ನಾಲ್ವರ ಪೈಕಿ ಮೂವರು ದಾಸರ ಓಣಿಯಲ್ಲಿ ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಸಹ ನಡೆದಿತ್ತು. ವಿವಾಹ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಆಗಮಿಸಿದ್ದರು ಎಂದು ಹೇಳಲಾಗಿದೆ.
ಆದರೆ, ದಂಪತಿ ಬಾಗಿಲು ತೆಗೆಯದೆ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ದುಷ್ಕರ್ಮಿಗಳು ಚರಂಡಿಯಲ್ಲಿ ಬಿಸಾಕಿದ್ದಾರೆ.
ಸದ್ಯ ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಚಿವ ಹೆಚ್.ಕೆ. ಪಾಟೀಲ್ ಸಹ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296