ಭಾರತದ ಭವಿಷ್ಯಕ್ಕಾಗಿ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾರು ಹರಿಸಿದ ಮತಾಂಧರನ್ನು ಹಿಡಿಯದೆ ಹಾಗೇ ಬಿಟ್ಟಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ರಾಮನವಮಿ ಹಬ್ಬದ ದಿನ ರಾಮಭಕ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಕಲಾವಿದರಾದ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿಯ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ. ಉಡುಪಿಯ ಹಾಸ್ಟೆಲ್ ಒಂದರಲ್ಲಿ ಹೆಣ್ಮಕ್ಕಳ ವಿಡಿಯೋ ಮಾಡಿದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತಂದಿಲ್ಲ ಎಂದರು.
ಸಿದ್ದರಾಮಯ್ಯರ ಸರಕಾರ ದಿವಾಳಿಯಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ರಾಜ್ಯದ ಯಾವುದಾದರೂ ಮೂಲೆಯಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿ ನಡೆಯುತ್ತಿದ್ದರೆ ತೋರಿಸಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ನೀರಾವರಿ ಯೋಜನೆಗಳೂ ಸಂಪೂರ್ಣ ಸ್ಥಗಿತವಾಗಿವೆ. ಗುಂಡಿಬಿದ್ದ ರಸ್ತೆಗಳ ಗುಂಡಿ ಮುಚ್ಚಲೂ ಇವರಿಂದ ಆಗುತ್ತಿಲ್ಲ.
ಜನಹಿತವನ್ನು ಸಂಪೂರ್ಣ ಮರೆತು ಒಂದು ರೀತಿ ತುಘಲಕ್ ದರ್ಬಾರ್ ನಡೆಸುತ್ತಿರುವ ಈ ಸರಕಾರಕ್ಕೆ ಜನರೇ ಇವತ್ತು ಛೀಮಾರಿ ಹಾಕುತ್ತಿದ್ದಾರೆ ಎಂದು ತಿಳಿಸಿದರು.
28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಅದರಲ್ಲಿ ಯಶಸ್ವಿಯಾಗುವ ವಿಶ್ವಾಸ ನನಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296