ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಹೊಂದಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸಂದೀಪ ಛಲವಾದಿ(24) ಮೃತ ಬೈಕ್ ಸವಾರನಾಗಿದ್ದು, ಸುಭಾಷ್ ದೇವಾಡಿಗ(26) ಗಂಭೀರ ಗಾಯಗೊಂಡವನಾಗಿದ್ದಾನೆ. ಯಲ್ಲಾಪುರದ ಭರತ್ನಳ್ಳಿ ಗ್ರಾಮದ ಈ ಯುವಕರು ಸ್ನೇಹಿತನನ್ನು ಶಿರಸಿ ಬಸ್ ನಿಲ್ದಾಣಕ್ಕೆ ಬಿಟ್ಟು ವಾಪಸ್ಸಾಗುವಾಗ, ಇಳಿಜಾರಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸುಮಾರು 20 ಅಡಿ ಆಳದ ರಾಜಕಾಲುವೆಗೆ ಬಿದ್ದು, ಅಪಘಾತ ನಡೆದಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296