ಬೆಂಗಳೂರು: ಬೆಂಗಳೂರಿನ ಯಶವಂತ ಪುರ ಮೆಟ್ರೋ ಸ್ಟೇಷನ್ ಬಳಿ ಬೆಳಗ್ಗೆ 10.30ಕ್ಕೆ ನಡೆದ ಅಪಘಾತದಲ್ಲಿ ಕೆಎಸ್ ಆರ್ ಟಿಸಿ ಬಸ್ಸಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ನಾಗಸಂದ್ರ ನಿವಾಸಿ ರಾಜೇಂದ್ರ(45) ಮೃತ ದುರ್ದೈವಿ.
ಬೈಕ್ ನಲ್ಲಿ ಬರುವ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜೇಂದ್ರ ಅವರು ಎಡಬದಿಯಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದರು. ಆಗ ಬಲಭಾಗದಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ರಾಜೇಂದ್ರ ಅವರು ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಸ್ ನ ಚಕ್ರ ರಾಜೇಂದ್ರ ಅವರ ತಲೆ ಮೇಲೆ ಹರಿದ ಹಿನ್ನಲೆಯಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


