ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ನನ್ನು ಬಂಧಿಸಲಾಗಿದೆ.
ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರ ಸಿಂಗ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ನಲ್ಲಿ ಈತ ಕೈಚಳಕ ತೋರಿ ಭೂಗತವಾಗಿದ್ದ. ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಹ್ಯಾಕರ್ ರಾಜೇಂದ್ರ ಸಿಂಗ್ ನನ್ನು ಬಂಧಿಸಲಾಗಿದೆ.
ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದ. ಈತನಿಗಾಗಿ ನಾಲ್ಕು ವರ್ಷಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಹುಡುಕಾಟ ನಡೆಸಿದ್ದವು. ಸಿಸಿಬಿ ಅಧಿಕಾರಿಗಳು ಶ್ರೀಕಿಯಿಂದ ಸುಮಾರು 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆಯಲ್ಲಿ ಪಂಜಾಬ್ ನ ರಾಜೇಂದ್ರ ಸಿಂಗ್ ಹೆಸರು ಕೇಳಿಬಂದಿತ್ತು.
ರಾಜೇಂದ್ರ ಸಿಂಗ್ ಬಂಧನಕ್ಕೆ ಬಲೆ ಬೀಸಲಾಗಿತ್ತು. ಈತನನ್ನು ಪಂಜಾಬ್ ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ರಾಜೇಂದ್ರ ಸಿಂಗ್ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಬೀಳುವ ಸಾಧ್ಯತೆ ಇದೆ.


