ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗೆಲುವಿನ ಖಾತೆ ತೆರೆದಿದ್ದು, ಸೂರತ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚುನಾವಣೆಗೂ ಮುನ್ನವೇ ಸೂರತ್ ಕ್ಷೇತ್ರ ಬಿಜೆಪಿ ಖಾತೆಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತವಾಗಿದ್ದು, ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಹೀಗಾಗಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.
ಸೂರತ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ 8 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ್ದ ಮೂರು ನಾಮಪತ್ರಗಳಲ್ಲಿ ಮಾಡಿರುವ ಸಹಿಯಲ್ಲಿ, ಮೇಲ್ನೋಟಕ್ಕೆ ವ್ಯತ್ಯಾಸಗಳು ಕಂಡು ಬಂದ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ.
ಈ ಮೂಲಕ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗಿದ್ದು, ಗುಜರಾತ್ ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296