ಗೋಧಿ ಕಟಾವು ಮಷಿನ್ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.
ಸದ್ಯ ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296