ವೇಗವಾಗಿ ಚಲಿಸುತ್ತಿದ್ದ ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 28 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಅಪಘಾತದಲ್ಲಿ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಸುಮಾರು 22 ಜನರಿಗೆ ಗಾಯಗಳಾಗಿದ್ದು, ಅವರನ್ನು ಬಾಸಿಮಾದ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಟರ್ಬತ್ ನಿಂದ ಕ್ವೆಟ್ಟಾಗೆ ತೆರಳುತ್ತಿದ್ದ ಬಸ್, ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ ಸುಮಾರು 700 ಕಿಲೋಮೀಟರ್ ದೂರದಲ್ಲಿರುವ ವಾಶುಕ್ ಪಟ್ಟಣದ ಸಮೀಪ ಕಂದಕಕ್ಕೆ ಬಿದ್ದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಸಾವನ್ನಪ್ಪಿದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಪ್ರಯಾಣಿಕರ ಬಸ್ ನ ಟೈರ್ ಒಡೆದ ನಂತರ ಈ ಅಪಘಾತ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ಅಪಘಾತಕ್ಕೆ ಚಾಲಕನ ಅತಿಯಾದ ವೇಗವೇ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖಾ ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296