ಗದಗ: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದ ಬಳಿ ಸ್ಟೇರಿಂಗ್ ಜಾಮ್ ಆಗಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಇದರ ಪರಿಣಾಮ ಬಸ್ ನಲ್ಲಿದ್ದ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿದೆ.
ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚೀರಾಟ ಕೇಳಿ ಗ್ರಾಮಸ್ಥರು ಓಡಿ ಬಂದಿದ್ದು, ಬಸ್ ನ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನುರಕ್ಷಿಸಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಸ್ಥಿತಿಯಲ್ಲಿಲ್ಲದ ಬಸ್ ಗಳು ರಸ್ತೆಗೆ ಇಳಿಸಿದ್ದೇ ದುರಂತಕ್ಕೆ ಕಾರಣ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


