ಬೆಂಗಳೂರು: ದಾಂಪತ್ಯ ಕಲಹದಿಂದಾಗಿ ವ್ಯಕ್ತಿಯೊಬ್ಬ “ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ” ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಾಂಪತ್ಯ ಕಲಹವೇ ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂದಿನಿ ಲೇಔಟ್ ವ್ಯಾಪ್ತಿಯ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿದ್ದು, ಈ ದಂಪತಿ ಒಂದು ವರ್ಷದಿಂದಬೇರ್ಪಟ್ಟು ಜೀವನ ನಡೆಸುತ್ತಿದ್ದರು. ಆರೋಪಿಯಾದ ಪತಿ ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್ ಬುಕ್ ನಲ್ಲಿ
‘ಕಲಾ ಶಶಿ’ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದಾನೆ. ಅದಾದ ಬಳಿಕ ಆರೋಪಿಯು ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.
ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296